ಹೂವಿನ ಹಿಪ್ಪರಗಿಯಲ್ಲಿ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ರಾಜುಗೌಡ ಪಾಟೀಲರಿಂದ ಭೂಮಿ ಪೂಜೆ

ಹೂವಿನ ಹಿಪ್ಪರಗಿ ಪಟ್ಟಣದಲ್ಲಿ ಸಿ ಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡಿದ ಶಾಸಕರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದು, ಗ್ರಾಮಗಳ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ದೇವರ ಹಿಪ್ಪರಗಿ ಶಾಸಕರಾದ ರಾಜುಗೌಡ ಬಿ. ಪಾಟೀಲ್ ಅವರು ಹೇಳಿದರು.

 

ಸಮೀಪದ ಹೂವಿನ ಹಿಪ್ಪರಗಿ ಗ್ರಾಮದಲ್ಲಿ ಲೆಕ್ಕ ಶೀರ್ಷಿಕೆ 5054 ಯೋಜನೆಯಡಿ ಮಂಜೂರಾದ ನೂತನ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಸಾರ್ವಜನಿಕರ ದಶಕಗಳ ಬೇಡಿಕೆಯಾಗಿದ್ದ ಈ ರಸ್ತೆ ನಿರ್ಮಾಣದಿಂದ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗಲಿದೆ.
ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಗ್ರಾಮದ ಹಿರಿಯರು, ಪ್ರಮುಖ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಉಪಸ್ಥಿತರಿದ್ದರು. ರಸ್ತೆ ಕಾಮಗಾರಿಗೆ ಚಾಲನೆ ಸಿಕ್ಕಿದ್ದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ