ಮಂಡ್ಯ ಜಿಲ್ಲಾ ಬೆಸ್ತರ ಸಂಘದ ವತಿಯಿಂದ ವಿಧಾನ ಪರಿಷತ್ ಸದಸ್ಯ ಆರ್. ರಘು ಕೌಟಿಲ್ಯ ಅವರಿಗೆ ಅಭಿನಂದನೆ

Veer Rc
By Veer Rc

ಮಂಡ್ಯ:ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಆರ್. ರಘು ಕೌಟಿಲ್ಯ ಅವರನ್ನು ಮಂಡ್ಯ ಜಿಲ್ಲಾ ಬೆಸ್ತರ ಸಂಘದ ವತಿಯಿಂದ ನಗರದ ಪ್ರವಾಸ ಮಂದಿರದಲ್ಲಿ ಆತ್ಮೀಯವಾಗಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಘದ ಪದಾಧಿಕಾರಿಗಳು ನೂತನ ಎಂಎಲ್‌ಸಿ ಅವರನ್ನು ಶಾಲು ಹೊದಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರ್. ರಘು ಕೌಟಿಲ್ಯ ಅವರ ಆಯ್ಕೆಯು ಜಿಲ್ಲೆಯ ಅಭಿವೃದ್ಧಿಗೆ ಹೊಸ ಹುರುಪು ನೀಡಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಬೆಸ್ತರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ಹಾಡ್ಯ ಉಮೇಶ್, ಮಂಡ್ಯ ಜಿಲ್ಲಾ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕಿ ಶಿಲ್ಪ ಡಿ., ಗಾಣದಾಳು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಕುಮಾರ್, ಚಂದಗಾಲುವಿನ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್ ಸೇರಿದಂತೆ ಸಂಘದ ಹಲವು ಮುಖಂಡರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Share This Article