ನಾಳೆ ಮಾನ್ಯ ಮುಖ್ಯಮಂತ್ರಿಗಳಿಂದ ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ ಅಂತಿಮ ಹಂತದ ಸಿದ್ಧತೆಗಳ ಪರಿವೀಕ್ಷಣೆ

ವರದಿ : ಧನರಾಜಗೌಡ ಪಾಟೀಲ್

ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ.

ನಮ್ಮ ಭಾಗದಲ್ಲಿ ಇನ್ನಷ್ಟು ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.

ಈ ಹಿನ್ನಲೆಯಲ್ಲಿ ಇಂದು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಜೊತೆಗಿದ್ದರು.

Siddaramaiah #cyclevelodrome

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ