ಕಡಲೆ ಕದ್ದವನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಜನ!

ಗದಗದಲ್ಲಿ (Gadag ) ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ಕಡಲೆ ಕಳ್ಳನಿಗೆ (Thief) ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ.

ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ವಾಯುವಿಹಾರಕ್ಕೆ ಬಂದ ಜನರ ಕಣ್ಣಿಗೆ ಕಳ್ಳ ಸಿಕ್ಕಿಬಿದ್ದಿದ್ದು ರೈತರಿಗೆ ಮಾಹಿತಿ ನೀಡಿದ್ದಾರೆ.

ರೈತರು ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಧರ್ಮದೇಟು ಕೊಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ರೈತರ ಜಮೀನುಗಳಲ್ಲಿ ಕಡಲೆ ಕಳ್ಳತನ ನಡೆಯುತ್ತಿದ್ದು, ಇದರಿಂದ ರೈತರು ಕಂಗಾಲಾಗಿದ್ದರು ಎನ್ನಲಾಗಿದೆ.

ಆಕ್ರೋಶಗೊಂಡ ರೈತರು ಕಳ್ಳನ ತಲೆ ಹಾಗೂ ಕೊರಳಿಗೆ ಕಡಲೆ ಗಿಡಗಳ ಮಾಲೆ ಹಾಕಿ ಪಾಠ ಕಲಿಸಿದ್ದಾರೆ. ಮಾಹಿತಿ ಪಡೆದ ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ನಿಯಂತ್ರಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ