ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು : ಶಾಸಕ ಯತ್ನಾಳ್ ವಿರುದ್ಧ ಬೇಲ್ ರಹಿತ ಬಂಧನ ವಾರೆಂಟ್

ಮಾನಹಾನಿ ಆರೋಪ ಪ್ರಕರಣದಲ್ಲಿ ವಿಚಾರಣೆಗೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.

ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಖಾಸಗಿ ದೂರು ಸಂಬಂಧ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಯತ್ನಾಳ್‌ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಮುಂದಿನ ವಿಚಾರಣೆಯನ್ನು ಜ.20ಕ್ಕೆ ಮುಂದೂಡಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುವ ಸಂದರ್ಭದಲ್ಲಿ ಯತ್ನಾಳ್ ಅವರು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಶಿವಾನಂದ ಎಸ್.ಪಾಟೀಲ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಈ ಖಾಸಗಿ ದೂರು ದಾಖಲಿಸಿದ್ದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ