ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಅಂಗವಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕ್ಷೇತ್ರದಲ್ಲಿ ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ನಡೆಸಿದರು. ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತ ಯಾಚಿಸಿದರು. ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ, ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ, ಜಿಲ್ಲಾಧ್ಯಕ್ಷ ಶಾಂತಗೌಡ, ಶಾಸಕ ಬಸವರಾಜ ಮತ್ತಿಮೂಡ್, ಪಕ್ಷದ ಪ್ರಮುಖ ಪಿ.ಎಚ್.ಪೂಜಾರ್, ಹಲವಾರು ಮುಖಂಡರು, ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದರು.
