ಸಿಂದಗಿ ತಾ.ಪಂ.ಗೆ ನೂತನ ವಾಹನ ಸೇರ್ಪಡೆ: ಶಾಸಕ ಅಶೋಕ ಮನಗೂಳಿ ಅವರಿಂದ ಚಾಲನೆ

ಸಿಂದಗಿ ತಾ.ಪಂ.ಗೆ ನೂತನ ವಾಹನ ಸೇರ್ಪಡೆ: ಶಾಸಕ ಅಶೋಕ ಮನಗೂಳಿ ಅವರಿಂದ ಚಾಲನೆ

ಸಿಂದಗಿ: ತಾಲೂಕು ಪಂಚಾಯತ್ ಕಾರ್ಯಾಲಯದ ಆಡಳಿತಾತ್ಮಕ ಕೆಲಸಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ನೂತನವಾಗಿ ಖರೀದಿಸಲಾದ ಸರ್ಕಾರಿ ವಾಹನಕ್ಕೆ ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ ಮನಗೂಳಿ ಅವರು ಇಂದು ಪೂಜೆ ಸಲ್ಲಿಸಿ ಚಾಲನೆ ನೀಡಿದರು.


ಬಳಿಕ ಮಾತನಾಡಿದ ಶಾಸಕರು, “ತಾಲೂಕಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಅಧಿಕಾರಿಗಳ ಓಡಾಟಕ್ಕೆ ಅನುಕೂಲವಾಗಲು ಈ ವಾಹನವನ್ನು ಒದಗಿಸಲಾಗಿದೆ. ಇದರಿಂದ ಅಭಿವೃದ್ಧಿ ಕೆಲಸಗಳ ಮೇಲ್ವಿಚಾರಣೆ ಹಾಗೂ ಆಡಳಿತಾತ್ಮಕ ಕಾರ್ಯಗಳು ಇನ್ನು ಮುಂದೆ ಶೀಘ್ರವಾಗಿ ನಡೆಯಲಿವೆ,” ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ನೂತನ ವಾಹನದ ಸೇರ್ಪಡೆಯಿಂದ ಸಾರ್ವಜನಿಕ ಸೇವೆಗಳಿಗೆ ಹೊಸ ಚೈತನ್ಯ ಬಂದಂತಾಗಿದೆ.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ