ಮೇ 16ರಂದು ಟೋಕರೆ ಕೋಳಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಅಧಿಕಾರಿಗಳಿಗೆ ಸನ್ಮಾನ ಸಮಾರಂಭ

ಹುಮ್ನಾಬಾದ್: ಅಖಿಲ ಭಾರತೀಯ ಟೋಕರೆ ಕೋಳಿ ಸಮಾಜ ಹಾಗೂ ಅಖಿಲ ಭಾರತೀಯ ಟೋಕರೆ ಕೋಳಿ ಯುವ ಘಟಕ ಹುಮ್ನಾಬಾದ್ ವತಿಯಿಂದ ಮೇ 16ರಂದು ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಜರುಗಲಿದೆ. ಈ ವರ್ಷದ ಎಸ್‌ಎಸ್‌ಎಲ್‌ಸಿ (SSLC) ಹಾಗೂ ಪಿಯುಸಿ (PUC) ಪರೀಕ್ಷೆಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು, ಇತ್ತೀಚೆಗೆ ಬಡ್ತಿ ಪಡೆದ ಹಾಗೂ ಸೇವೆಯಿಂದ ನಿವೃತ್ತರಾದ ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು.

ಸಮಾಜದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಬುದ್ಧಿಜೀವಿಗಳು ಹಾಗೂ ಸರ್ಕಾರಿ ನೌಕರರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.

ಮಾಹಿತಿ ನೀಡಲು ಮನವಿ:
ಹುಮ್ನಾಬಾದ್ ಮತಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿರುವ ಅರ್ಹ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳ ಮಾಹಿತಿಯನ್ನು ಕೆಳಕಂಡ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ:
ಅನಿಲ್ ಪಲ್ಲೆರಿ: 9448435530
ಶರಣು ಕಂದಗೂಳ: 9483883888
ದಯಾನಂದ ಮೇತ್ರಿ: 9035555636
ಸಿದ್ದಲಿಂಗಯ್ಯ ಅಯ್ಯನೋರ್: 9482807777

 

ಬೀದರ ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲಿ ವರದಿಗಾರರು ಬೇಕಾಗಿದ್ದಾರೆ ಸಂಪರ್ಕಿಸಿ :: 9008329745

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ