ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಪಕ್ಷ ಸಂಘಟನೆ: ಬೆಂಗಳೂರಿನಲ್ಲಿ ಕೆಪಿಸಿಸಿ ಮಹತ್ವದ ಸಭೆ

Veer Rc
By Veer Rc

ಬೆಂಗಳೂರು :: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಭಾನುವಾರ ಬೆಂಗಳೂರಿನ ಹೊರವಲಯದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಮಹತ್ವದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಭೆಯಲ್ಲಿ ಮುಖ್ಯವಾಗಿ ಎಸ್ ಐ ಆರ್ (SIR) ಪ್ರಕ್ರಿಯೆ, ಜಿ ಬಿ ಎ (GBA), ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಕಾರ್ಯತಂತ್ರಗಳ ಕುರಿತು ಗಂಭೀರ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಹಾಗೂ ಸಚಿವರ ದಂಡೇ ನೆರೆದಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಭೆಯ ನೇತೃತ್ವ ವಹಿಸಿದ್ದರು.
ರಾಜ್ಯ ಸಚಿವ ಸಂಪುಟದ ಪ್ರಮುಖರಾದ ಜಿ. ಪರಮೇಶ್ವರ, ಎಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಎಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಮಧು ಬಂಗಾರಪ್ಪ, ಎನ್.ಎಸ್. ಬೋಸರಾಜು ಹಾಗೂ ಸತೀಶ್ ಜಾರಕಿಹೊಳಿ ಅವರು ಉಪಸ್ಥಿತರಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಜಿ.ಸಿ. ಚಂದ್ರಶೇಖರ್, ಮಂಜುನಾಥ ಭಂಡಾರಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ತಿನ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಶಾಸಕರು, ಸಚಿವರು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು.

ಮುಂಬರುವ ದಿನಗಳಲ್ಲಿ ಎದುರಾಗಲಿರುವ ರಾಜಕೀಯ ಸವಾಲುಗಳು ಹಾಗೂ ಚುನಾವಣೆಗಳನ್ನು ಒಗ್ಗಟ್ಟಿನಿಂದ ಎದುರಿಸಲು ಈ ಸಭೆಯಲ್ಲಿ ಮಹತ್ವದ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ.

Share This Article