ಬೆಂಗಳೂರು:ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಸಾಧನೆಯನ್ನು ಕೊಂಡಾಡಿರುವ ಸಚಿವರು, “ನಿಮ್ಮ ದಕ್ಷ ನಾಯಕತ್ವ, ಸಂಘಟನಾ ಚಾತುರ್ಯ ಮತ್ತು ಕಠಿಣ ಪರಿಶ್ರಮಕ್ಕೆ ಸಿಕ್ಕ ಅತ್ಯಂತ ಸೂಕ್ತ ಗೌರವ ಇದಾಗಿದೆ” ಎಂದು ಶ್ಲಾಘಿಸಿದ್ದಾರೆ.
https://www.facebook.com/share/1XdoTy5aD4/
ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ರಾಜ್ಯವು ಅಭಿವೃದ್ಧಿಯ ಪಥದಲ್ಲಿ ಸಾಗಲಿ ಮತ್ತು ಜನರ ನಿರೀಕ್ಷೆಗಳು ಸಾಕಾರಗೊಳ್ಳಲಿ ಎಂದು ಆಶಿಸಿರುವ ಲಕ್ಷ್ಮೀ ಹೆಬ್ಬಾಳಕರ್, ಅವರ ಮುಂದಿನ ಅಧಿಕಾರಾವಧಿಯು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿನ ಒಗ್ಗಟ್ಟನ್ನು ಸಾರುವ ಈ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಬೆಂಬಲಿಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.