ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಸಿದ್ದರಾಮಯ್ಯ ಅವರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ

Veer Rc
By Veer Rc

 

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಸದಸ್ಯರಾಗಿ ಆಯ್ಕೆಯಾಗಿರುವ ಶ್ರೀ ಸಿದ್ದರಾಮಯ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಅವರು ಸಾರ್ವಜನಿಕ ಜೀವನದಲ್ಲಿ ಗಳಿಸಿರುವ ಅಪಾರ ಅನುಭವ, ಸಾಮಾಜಿಕ ನ್ಯಾಯದ ಪರವಾದ ಅಚಲ ಬದ್ಧತೆ ಹಾಗೂ ಸಂವಿಧಾನದ ಮೌಲ್ಯಗಳ ಮೇಲೆ ಅಚಲ ನಂಬಿಕೆ ಹೊಂದಿರುವವರು. ದೇಶದಲ್ಲಿ ಇಂದು ಸಂವಿಧಾನಿಕ ಮೌಲ್ಯಗಳ ಮೇಲೆ ನಡೆಯುತ್ತಿರುವ ದಾಳಿ ಹಾಗೂ ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವ ಪ್ರವೃತ್ತಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಅವರ ಅನುಭವ, ಚಿಂತನೆಗಳು ಮತ್ತಷ್ಟು ಶಕ್ತಿ ತುಂಬಲಿವೆ.

ಶ್ರೀ ಮಲ್ಲಿಕಾರ್ಜುನ ಖರ್ಗೆ ಹಾಗೂ ಶ್ರೀ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಎಲ್ಲರೂ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗೆ, ಸಾಮಾಜಿಕ ನ್ಯಾಯದ ವಿಸ್ತರಣೆಗೆ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ಮತ್ತು ದೇಶದ ಸಾಮಾನ್ಯ ಜನರ ಹಿತಾಸಕ್ತಿಗಳನ್ನು ಕಾಪಾಡುವ ಹೋರಾಟವನ್ನು ಇನ್ನಷ್ಟು ಬಲಿಷ್ಠಗೊಳಿಸುತ್ತೇವೆ.

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಗೆ ಒಂದು ಶಕ್ತಿ. ಎಂಟು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅವರ ಅನುಭವ ಭಾರತದಲ್ಲಿ ಕಾಂಗ್ರೆಸ್ ಪ್ರಭಾವ ವಿಸ್ತರಿಸಲು ನೆರವಾಗಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ಹೊಸ ಜವಾಬ್ದಾರಿಯಲ್ಲಿ ಸಿದ್ದರಾಮಯ್ಯ ಅವರು ಮತ್ತಷ್ಟು ಯಶಸ್ಸು ಗಳಿಸಲಿ ಎಂಬುದು ನನ್ನ ಹಾರೈಕೆ.

ರಣದೀಪ್ ಸಿಂಗ್ ಸುರ್ಜೇವಾಲ
ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ

Share This Article