ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎನ್. ರವಿಕುಮಾರರಿಂದ ಶಾಸಕ ಶರಣಗೌಡ ಕಂದಕೂರ ಭೇಟಿ

 

ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಗೆಲುವಿಗೆ ಸಮಾಲೋಚನೆ

ಯಾದಗಿರಿ: ಮುಂಬರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎನ್. ರವಿಕುಮಾರ ಅವರು ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಎನ್‌ಡಿಎ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರ ಪರವಾಗಿ ಬೆಂಬಲ ಕ್ರೋಢೀಕರಿಸುವುದು ಹಾಗೂ ಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಯ ಗೆಲುವಿಗಾಗಿ ಸಂಘಟಿತವಾಗಿ ಕಾರ್ಯನಿರ್ವಹಿಸುವ ಕುರಿತು ಉಭಯ ನಾಯಕರು ಸಮಾಲೋಚನೆ ನಡೆಸಿದರು.

ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನಡುವೆ ಸಮನ್ವಯ ಸಾಧಿಸುವುದು, ಶಿಕ್ಷಕ ಮತದಾರರನ್ನು ಸಂಪರ್ಕಿಸುವುದು ಹಾಗೂ ಚುನಾವಣಾ ಪ್ರಚಾರವನ್ನು ಪರಿಣಾಮಕಾರಿಯಾಗಿ ನಡೆಸುವ ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.

ಮೈತ್ರಿಕೂಟದ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಅಭ್ಯರ್ಥಿಯ ಪರವಾಗಿ ಬೆಂಬಲ ಕ್ರೋಢೀಕರಿಸುವ ಅಗತ್ಯದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಶ್ಚಂದ್ರ ಕಟಕಟಿ, ಮುಖಂಡರಾದ ರಜನಿಕಾಂತ್ ಕಟ್ಟಾ, ಮಲ್ಲಣ್ಣಗೌಡ ಹೊಸಳ್ಳಿ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ