ದೆಹಲಿ ಕರ್ನಾಟಕ ಸಂಘದಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಟಿ.ಬಿ. ಜಯಚಂದ್ರರಿಂದ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ

 ವರದಿ : ಜೋಶಿ ನವದೆಹಲಿ

 

ನವದೆಹಲಿ, ನ.13: 71ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ದೆಹಲಿಯ ದೆಹಲಿ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

 

ಕಾರ್ಯಕ್ರಮದಲ್ಲಿ ಕರ್ನಾಟಕ ಭವನದ ನಿವಾಸಿ ಆಯುಕ್ತ ಸಮೀರ್ ಶುಕ್ಲಾ, ಹೆಚ್ಚುವರಿ ನಿವಾಸಿ ಆಯುಕ್ತೆ ಅನನ್ಯ ಶ್ರೀವಾತ್ಸವ, ಸಹಾಯಕ ನಿವಾಸಿ ಆಯುಕ್ತ ಸಿ. ಮೋಹನ್ ಕುಮಾರ್, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಆರ್. ರೇಣು ಕುಮಾರ್, ಸಂಘದ ಪದಾಧಿಕಾರಿಗಳು, ಕರ್ನಾಟಕ ಭವನದ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ ಮತ್ತು ಏಕತೆಯನ್ನು ಪ್ರತಿಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆದವು. ರಾಷ್ಟ್ರ ರಾಜಧಾನಿಯಲ್ಲಿ ನೆಲೆಸಿರುವ ಕನ್ನಡಿಗರು ಒಗ್ಗೂಡಿ ಕರ್ನಾಟಕದ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂಭ್ರಮದಿಂದ ಆಚರಿಸಿದರು.

ಕಾರ್ಯಕ್ರಮವು ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸುವ ವೇದಿಕೆಯಾಗಿ ಮೂಡಿಬಂದಿದ್ದು, ದೆಹಲಿಯಲ್ಲಿ ಕನ್ನಡದ ಕಂಪನ್ನು ಮತ್ತಷ್ಟು ಪಸರಿಸಿತು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ