ದುಬೈ, ನ.22: ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್ ಅವರು ದುಬೈನಲ್ಲಿ ನಡೆಯಲಿರುವ ದುಬೈ ಕರ್ನಾಟಕ ರಾಜ್ಯೋತ್ಸವ–2026 ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ಸಂಘ ದುಬೈ ಹಾಗೂ ಕನ್ನಡಿಗರ ಕೂಟ ದುಬೈ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಈ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎನ್. ರವಿ ಕುಮಾರ್ ಅವರು ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಲಿದ್ದು, ವಿದೇಶದಲ್ಲಿರುವ ಕನ್ನಡಿಗರೊಂದಿಗೆ ಸಂವಾದ ನಡೆಸಲಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿರುವ ಎನ್. ರವಿ ಕುಮಾರ್ ಅವರು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಸಮಕಾಲೀನ ರಾಜಕೀಯ, ಜನಪರ ವಿಷಯಗಳು ಹಾಗೂ ವಿಧಾನ ಪರಿಷತ್ತಿನ ಚರ್ಚೆಗಳಲ್ಲಿ ತಮ್ಮ ಸಕ್ರಿಯ ಭಾಗವಹಿಸುವಿಕೆಯಿಂದ ಗುರುತಿಸಿಕೊಂಡಿದ್ದಾರೆ.
ದುಬೈ ರಾಜ್ಯೋತ್ಸವದಲ್ಲಿ ಅವರ ಭಾಗವಹಿಸುವಿಕೆ ಯುಎಇಯಲ್ಲಿರುವ ಕನ್ನಡಿಗರಲ್ಲಿ ವಿಶೇಷ ಉತ್ಸಾಹ ಮೂಡಿಸಿದ್ದು, ಕಾರ್ಯಕ್ರಮಕ್ಕೆ ಹೆಚ್ಚಿನ ಮಹತ್ವವನ್ನು ತಂದಿದೆ.