ವಿದೇಶದಲ್ಲಿಯೂ ಕನ್ನಡದ ಕಂಪು ಪಸರಿಸುತ್ತಿರುವುದು ಹೆಮ್ಮೆಯ ಸಂಗತಿ: ಎನ್. ರವಿಕುಮಾರ್

ದುಬೈ, ನ.23: ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಅವರು ದುಬೈನಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ–2026 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

 

ಕರ್ನಾಟಕ ಸಂಘ ದುಬೈ ಹಾಗೂ ಕನ್ನಡಿಗರ ಕೂಟ ದುಬೈ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದೇಶದ ನೆಲದಲ್ಲಿಯೂ ಕನ್ನಡ ಭಾಷೆ, ನಾಡು-ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅನಿವಾಸಿ ಕನ್ನಡಿಗರು ತೋರುತ್ತಿರುವ ಅಭಿಮಾನ, ಕಾಳಜಿ ಹಾಗೂ ಸಂಘಟನಾತ್ಮಕ ಪ್ರಯತ್ನಗಳು ಶ್ಲಾಘನೀಯ ಎಂದು ಹೇಳಿದರು.

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿ ಅನಿವಾಸಿ ಕನ್ನಡಿಗರೊಂದಿಗೆ ಸಂತಸದ ಕ್ಷಣಗಳನ್ನು ಹಂಚಿಕೊಳ್ಳಲು ಅವಕಾಶ ದೊರೆತಿರುವುದು ಸಂತಸ ತಂದಿದೆ. ಕನ್ನಡ ಭಾಷೆ ಮತ್ತು ಕನ್ನಡ ನಾಡು-ನುಡಿಯ ಅಭಿಮಾನವನ್ನು ಎಲ್ಲರೂ ಮತ್ತಷ್ಟು ಬಲಪಡಿಸಬೇಕು ಎಂದು ಅವರು ಕರೆ ನೀಡಿದರು.

ವಿದೇಶದಲ್ಲಿದ್ದರೂ ಕನ್ನಡದ ಸಂಸ್ಕೃತಿ ಮತ್ತು ಪರಂಪರೆಯನ್ನು ಜೀವಂತವಾಗಿಟ್ಟುಕೊಂಡಿರುವ ಕನ್ನಡಿಗರ ಕಾರ್ಯಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿವೆ ಎಂದು ಎನ್. ರವಿಕುಮಾರ್ ಹೇಳಿದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ